Tuesday, October 21, 2014

ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಹೆಚ್‌ಐವಿ / ಏಡ್ಸ್‌ ಮಾಹಿತಿ ಮತ್ತು ಸಂವೇದನಾಶೀಲ ಕಾರ್ಯಗಾರದಿನಾಂಕ 21/10/2014 ರಂದು  ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್‌ ಪಡೆಯ ಕೇಂದ್ರ ಸ್ಥಾನದಲ್ಲಿ ಉಡುಪಿ ಜಿಲ್ಲೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳಿಗೆ ಕರ್ನಾಟಕ ರಾಜ್ಯ ಏಡ್ಸ್‌ ಪ್ರಿವೆನ್‌ಷನ್‌ ಸೊಸೈಟಿ ಇದರ ವತಿಯಿಂದ ಸಂವೇದನಾಶೀಲ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಗಾರದಲ್ಲಿ ಉಡುಪಿ ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿ ಡಾ. ಎಚ್‌. ಅಶೋಕ್ ಹಾಗೂ ಅವರ ಸಿಬ್ಬಂದಿ ವರ್ಗದವರು ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡದರು ಹಾಗೂ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರಾದ ಶ್ರೀ ಪಿ. ರಾಜೇಂದ್ರ ಪ್ರಸಾದ್‌ ಐಪಿಎಸ್‌, ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಶ್ರೀ ಸಂತೋಷ್‌ ಕುಮಾರ್‌, ಸಹಾಯಕ ಪೊಲೀಸ್‌ ಅಧೀಕ್ಷಕರಾದ ಶ್ರೀ ಅಣ್ಣಾಮಲೈ ಐಪಿಎಸ್‌,  ಉಡುಪಿ ಉಪ ವಿಭಾಗದ ಪೊಲೀಸ್‌ ಉಪಾಧೀಕ್ಷಕರಾದ ಡಾ. ಪ್ರಭುದೇವ ಮಾನೆ ಮತ್ತು ಸಶಸ್ತ್ರ ಪೊಲೀಸ್‌ ನಿರೀಕ್ಷಕರಾದ ಶ್ರೀ ಪಿ. ಉಮೇಶ್‌ ಹಾಗೂ ಉಡುಪಿ ಜಿಲ್ಲೆಯ ಇತರ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಯವರುಗಳು ಹಾಜರಿದ್ದರು.

No comments: