Monday, June 15, 2015

Daily Crime Reports As on 15/06/2015 at 19:30 Hrsಮಟ್ಕಾ ದಾಳಿ ಪ್ರಕರಣ
  • ಬ್ರಹ್ಮಾವರ: ದಿನಾಂಕ 15/06/2015 ರಂದು 12.00 ಗಂಟೆಗೆ ಬ್ರಹ್ಮಾವರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಶ್ರಿ ಅನಂತಪದ್ಮನಾಭ ಕೆ.ವಿ ರವರು ಸಿಬ್ಬಂದಿಯವರೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿರುವಾಗ ದೊರೆತ ಖಚಿತ ವರ್ತಮಾದ ಮೇರೆಗೆ ಉಪ್ಪೂರು ಗ್ರಾಮದ ಕೊಳಲಗಿರಿ ಗಿರಿ ಬಾರ್ & ರೆಸ್ಟೋರೆಂಟಿನ ಎದುರು ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಚೀಟಿ ಬರೆದು ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ಆರೋಪಿ ಕೃಷ್ಣ ಪೂಜಾರಿ (45) ತಂದೆ: ರಾಮ ಪೂಜಾರಿ ವಾಸ: ಲಕ್ಷ್ಮೀ ನಗರ ಉಪ್ಪೂರು ಗ್ರಾಮ ಎಂಬಾತನನ್ನು ದಸ್ತಗಿರಿ ಮಾಡಿ ಆತನ ವಶದಲ್ಲಿದ್ದ ಮಟ್ಕಾ ಜುಗಾರಿ ಆಟಕ್ಕೆ ಬಳಸಿದ ರೂಪಾಯಿ 3,635/-, ಮಟ್ಕಾ ನಂಬ್ರ ಬರೆದ ಚೀಟಿ-1, ಬಾಲ್ ಪೆನ್-1,ನ್ನು ಮಹಜರು ಮುಖೇನ ಸ್ವಾಧೀನಪಡಿಸಿಕೊಂಡಿರುವುದಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 117/15 ಕಲಂ 78(1)(ಎ)(VIಕರ್ನಾಟಕ ಪೊಲೀಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಲಾಗಿದೆ.

No comments: